ಚಿಕ್ಕಬಳ್ಳಾಪುರ, ಮಾರ್ಚ್ 31: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರ ನೇತೃತ್ವದಲ್ಲಿ ಏಪ್ರಿಲ್ 1, 2026 (ಬುಧವಾರ) ರಂದು ನಂದಿ ಗಿರಿ ಪ್ರದಕ್ಷಿಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3:30 ಗಂಟೆಗೆ ನಂದಿ ಬೋಗನಂಧೀಶ್ವರ ದೇವಾಲಯದ ಆವರಣದಿಂದ ಪ್ರಾರಂಭವಾಗಲಿರುವ ಈ ಪುಣ್ಯ ಕಾರ್ಯದಲ್ಲಿ ಎಲ್ಲಾ ಭಕ್ತಾದಿಗಳು, ಮುಖಂಡರು ಮತ್ತು ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ವಿನಂತಿಸಲಾಗಿದೆ.
ತಮಿಳುನಾಡಿನ ತಿರುವಣ್ಣಾಮಲೈಯಲ್ಲಿ ಪೌರ್ಣಮಿಯಂದು ನಡೆಯುವ ಪ್ರಸಿದ್ಧ ಗಿರಿ ಪ್ರದಕ್ಷಿಣೆಯ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಂದಿ ಬೆಟ್ಟದ ಸುತ್ತಲೂ ನಡೆಯುವ ಈ ಪ್ರದಕ್ಷಿಣೆಯು ಭಕ್ತರಿಗೆ ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ಜೊತೆಗೆ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.
ಸಂಸದ ಡಾ. ಕೆ. ಸುಧಾಕರ್ ಅವರು ಈ ಸಂದರ್ಭದಲ್ಲಿ ನಂದಿ ಗಿರಿಯ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಪುಣ್ಯ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದ್ದು, ಭಕ್ತರ ಅನುಕೂಲಕ್ಕಾಗಿ ಮಾರ್ಗದರ್ಶನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆಸಕ್ತ ಭಕ್ತರು ಮಧ್ಯಾಹ್ನ 3:30 ಗಂಟೆಗೆ ನಂದಿ ಬೋಗನಂಧೀಶ್ವರ ದೇವಾಲಯದ ಆವರಣದಲ್ಲಿ ನೇರವಾಗಿ ಹಾಜರಾಗಬಹುದು ಎಂದು ತಿಳಿಸಲಾಗಿದೆ.
.jpeg)
Post a Comment