ತುಮಕೂರು:ಮಠದ ಪ್ರಕಟಣೆ ಪ್ರಕಾರ, ದಿನಾಂಕ 02-05-2026ರಿಂದ 15-05-2026ರವರೆಗೆ ಪ್ರವೇಶ ಅರ್ಜಿಗಳನ್ನು ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಪ್ರವೇಶಕ್ಕಾಗಿ ಆಸಕ್ತ ವಿದ್ಯಾರ್ಥಿಗಳು ಅಥವಾ ಪಾಲಕರು ಖುದ್ದಾಗಿ ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಮಠದ ಲೆಕ್ಕಪತ್ರ ವಿಭಾಗದಲ್ಲಿ (Accounts Section) ಅರ್ಜಿಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.
ಗ್ರಾಮೀಣ ಬಡ ಕುಟುಂಬಗಳ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ ಹಾಗೂ ಅನ್ನದಾನ ವ್ಯವಸ್ಥೆಯನ್ನು ಒದಗಿಸುವ ಉದ್ದೇಶದಿಂದ ಈ ಅನಾಥಾಲಯ ಕಾರ್ಯನಿರ್ವಹಿಸುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಅರ್ಜಿ ಪಡೆದು ಸಲ್ಲಿಸುವಂತೆ ಮಠದ ಆಡಳಿತ ಮಂಡಳಿ ಮನವಿ ಮಾಡಿದೆ.

Post a Comment