ಚಿಕ್ಕಬಳ್ಳಾಪುರ, ಮಾರ್ಚ್ 28: ಕೈವಾರ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಜಮೀನು ಒದಗಿಸಿದ ಫಲಾನುಭವಿಗಳಿಗೆ ಮರ ಮತ್ತು ಮಾಲ್ಕಿಗಳ (ಕಟ್ಟಡ/ಸ್ಟ್ರಕ್ಚರ್) ಪರಿಹಾರ ಧನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿಸಲಾಯಿತು. ಒಟ್ಟು ₹2.8 ಕೋಟಿ ಮೊತ್ತದ ಪರಿಹಾರವನ್ನು ವಿತರಿಸಲಾಯಿತು.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಪರಿಹಾರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಸರ್ಕಾರದ ನೇರ ಲಾಭಾಂತರ ವರ್ಗಾವಣೆ (ಡಿಬಿಟಿ) ಮೂಲಕ ಪರಿಹಾರ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಕೈಗಾರಿಕಾ ಅಭಿವೃದ್ಧಿಯೊಂದಿಗೆ ರೈತರ ಹಿತ ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಕೈವಾರ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಭಾಗವಾಗಿ ಈ ಪರಿಹಾರ ವಿತರಿಸಲಾಗಿದೆ. ಸ್ಥಳೀಯ ಸಾರ್ವಜನಿಕ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Post a Comment