Top News

ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡರ ಹೆಸರು ಮರುನಾಮಕರಣ: ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ

 



ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಗೆ ಹಿರಿಯ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡ ಅವರ ಹೆಸರನ್ನು ಮರುನಾಮಕರಣ ಮಾಡಿದ ಹಿನ್ನೆಲೆ, ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಆಚರಣೆ ಸಮಿತಿಯ ಪದಾಧಿಕಾರಿಗಳು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.


ಶಿವಮೊಗ್ಗದ ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಂತವೇರಿ ಗೋಪಾಲಗೌಡರ ಪುತ್ರ ರಾಮಮನೋಹರ ಶಾಂತವೇರಿ, ಉಪಾಧ್ಯಕ್ಷ ಜೆ.ಎ. ಪುರುಷೋತ್ತಮ ಗೌಡ, ಸಮಿತಿಯ ಸದಸ್ಯರಾದ ಮಣಿಹೆಗಡೆ, ರಾಜಣ್ಣ ಪಟ್ಟಮಕ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ವಿಕ್ಟೋರಿಯಾ ಆಸ್ಪತ್ರೆಯೊಂದಕ್ಕೆ ಶಾಂತವೇರಿ ಗೋಪಾಲಗೌಡರ ಹೆಸರು ನೀಡಿರುವುದು ಅವರ ಸಮಾಜಮುಖಿ ಸೇವೆ ಮತ್ತು ಸಾರ್ವಜನಿಕ ಜೀವನದ ಸಾಧನೆಗೆ ಸಲ್ಲಿಸಿದ ಗೌರವವಾಗಿದೆ ಎಂದು ಸಮಿತಿ ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

Post a Comment

Previous Post Next Post