Top News

ಮಂಚೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಜಿಲ್ಲಾ ಪಂಚಾಯತ್ ಸಿಇಒ ಡಾ.ನವೀನ್ ಭಟ್ ಭೇಟಿ

  ಚಿಕ್ಕಬಳ್ಳಾಪುರ: ನಿನ್ನೆ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ನವೀನ್ ಭಟ್ ವೈ, ಐಎಎಸ್ ಅವರು ಮಂಚೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ದಂಡಿಗಾನಹಳ್ಳಿ ಕೆರೆಯಿಂದ ಆರಂಭವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಂಬಂಧ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು.


ಈ ವೇಳೆ ಯೋಜನೆಯ ಪ್ರಗತಿ, ಕಾರ್ಯನಿರ್ವಹಣೆ ಹಾಗೂ ಗ್ರಾಮಗಳಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಸೂಚನೆಗಳನ್ನು ನೀಡಿದರು.

ಬಳಿಕ ಮಂಚೇನಹಳ್ಳಿಯ ಅರಿವು ಕೇಂದ್ರವನ್ನು ವೀಕ್ಷಿಸಿದ ಮಾನ್ಯರು, ಗ್ರಾಮೀಣ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣದ ಅವಕಾಶ ಹೆಚ್ಚಿಸಲು ಬೇಸಿಗೆ ಅವಧಿಯಲ್ಲಿ ಕಂಪ್ಯೂಟರ್ ಶಿಕ್ಷಣದ ಬೇಸಿಗೆ ಶಿಬಿರಗಳನ್ನು ಆಯೋಜಿಸುವಂತೆ ಸೂಚಿಸಿದರು.


ನಂತರ ಮಂಚೇನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ, ವಾರ್ಷಿಕ ಪರೀಕ್ಷೆ–1ಕ್ಕೆ ಇನ್ನೂ ಕೆಲವೇ ದಿನಗಳು ಮಾತ್ರ ಉಳಿದಿರುವುದರಿಂದ ಯಾವುದೇ ಭಯ ಅಥವಾ ಆತಂಕವಿಲ್ಲದೆ ನಿಯಮಿತವಾಗಿ ಅಭ್ಯಾಸ ಮಾಡಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ, ಮಂಚೇನಹಳ್ಳಿ ತಾಲೂಕು ತಹಶೀಲ್ದಾರರು, ಗೌರಿಬಿದನೂರು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಆರ್‌ಡಬ್ಲ್ಯುಎಸ್ ಜೆಇ, ಎಇಇ, ಪಿಡಿಓಗಳು, ಜಿಲ್ಲಾ ಪಂಚಾಯತ್ ಎಸ್‌ಬಿಎಂ (ಜಿ) ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದ


ರು.

Post a Comment

Previous Post Next Post