ನಂಜನಗೂಡು,: ನಂಜನಗೂಡಿನ ಐತಿಹಾಸಿಕ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಐಪಿ ಅತಿಥಿ ಗೃಹವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ ಅವರು ಇಂದು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ನಂಜನಗೂಡು ಶಾಸಕರಾದ ದರ್ಶನ್ ಧ್ರುವನಾರಾಯಣ ಅವರು ಸಚಿವರೊಂದಿಗೆ ಸಹಭಾಗಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನೂತನ ಅತಿಥಿ ಗೃಹವು ಭಕ್ತಾದಿಗಳಿಗೆ ಮತ್ತು ದೇವಾಲಯಕ್ಕೆ ಭೇಟಿ ನೀಡುವ ಗಣ್ಯರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಸಚಿವ ರಾಮಲಿಂಗ ರೆಡ್ಡಿ ಮಾತನಾಡಿ, ದೇವಾಲಯಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯ ವಿಸ್ತರಣೆಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ಶಾಸಕ ದರ್ಶನ್ ಧ್ರುವನಾರಾಯಣ ಅವರು, “ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ ಸಚಿವರ ಸಹಕಾರ ಅಪಾರವಾಗಿದೆ. ಈ ಅತಿಥಿ ಗೃಹವು ಭಕ್ತರಿಗೆ ಅನುಕೂಲಕರವಾಗಲಿದೆ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ನಗರ ಬ್ಲಾಕ್ ಅಧ್ಯಕ್ಷರಾದ ಸಿ.ಎಂ. ಶಂಕರ್, ಇಒ ಕೃಷ್ಣ, ಶ್ರೀಧರ್, ಗೋಪಾಲ್ ಕೃಷ್ಣ, ಮುರುಗೇಶ್, ರವಿ, ಮಹೇಂದ್ರ, ಮಧು ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ದೇವಾಲಯದ ಆವರಣದಲ್ಲಿಯೇ ನಿರ್ಮಿಸಲಾಗಿರುವ ಈ ವಿಐಪಿ ಅತಿಥಿ ಗೃಹವು ಭವಿಷ್ಯದಲ್ಲಿ ಭಕ್ತರಿಗೆ ಮತ್ತು ಪ್ರಮುಖ ಅತಿಥಿಗಳಿಗೆ ಸೌಕರ್ಯ ಒದಗಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Post a Comment