ಗುಣಮಟ್ಟ ಮತ್ತು ಸಮಯಬದ್ಧತೆಗೆ ಅಧಿಕಾರಿಗಳಿಗೆ ಸೂಚನೆ
ಶಿಡ್ಲಘಟ್ಟ (ಚಿಕ್ಕಬಳ್ಳಾಪುರ ಜಿಲ್ಲೆ), ಮಾರ್ಚ್ 21: ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಯನ್ನು ಶಾಸಕ ಬಿ.ಎನ್. ರವಿಕುಮಾರ್ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಕಾಮಗಾರಿಯ ಪ್ರಗತಿಯನ್ನು ಅವಲೋಕಿಸಿದ ಅವರು, ಗುಣಮಟ್ಟವನ್ನು ಕಾಪಾಡುವಂತೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಉಪಯುಕ್ತವಾಗುವ ಸೌಕರ್ಯಗಳನ್ನು ಒದಗಿಸುವ ಮಹತ್ವದ ಕೇಂದ್ರವಾಗಿ ಈ ಭವನವು ರೂಪುಗೊಳ್ಳಲಿದೆ ಎಂದು ಅವರು ತಿಳಿಸಿದರು.
ಶಾಸಕರೊಂದಿಗೆ ಪುರಸಭೆ ಅಧಿಕಾರಿಗಳು, ಇಂಜಿನಿಯರ್ಗಳು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಭವನದ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ

Post a Comment