13 ವಾಹನ ವಶ; ₹10 ಲಕ್ಷ ಮೌಲ್ಯದ ಸ್ವತ್ತು ಪತ್ತೆ
ಚಿಕ್ಕಬಳ್ಳಾಪುರ, ಮಾ.11: ಜಿಲ್ಲೆಯ ಬಾಗೇಪಲ್ಲಿ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಆರೋಪಿಯಿಂದ ಸುಮಾರು ₹10 ಲಕ್ಷ ಮೌಲ್ಯದ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ಪ್ರದೇಶಗಳಲ್ಲಿ ಕಳವು ಮಾಡಲಾಗಿದ್ದ ವಾಹನಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಗೇಪಲ್ಲಿ ಠಾಣೆ ಪೊಲೀಸರ ತಂಡ ನಡೆಸಿದ ಸೂಕ್ತ ತನಿಖೆ ಮತ್ತು ಕಾರ್ಯಾಚರಣೆಯ ಫಲವಾಗಿ ಈ ಬಂಧನ ಸಾಧ್ಯವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿ
ದ್ದ ಬಾಗೇಪಲ್ಲಿ ಠಾಣೆ ಪೊಲೀಸರ ಕಾರ್ಯ ವೈಖರಿಯನ್ನು ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ವಲಯದಲ್ಲಿ ಶ್ಲಾಘಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Post a Comment