ತುಮಕೂರು, ಮಾರ್ಚ್ 28: ನಗರದ ಟೆನ್ನಿಸ್ ಕ್ರೀಡಾಂಗಣದಲ್ಲಿ ಇಂದು ಐಟಿಎಫ್ ಮಹಿಳಾ ವಿಶ್ವ ಟೆನ್ನಿಸ್ ಟೂರ್ ಡಬ್ಲ್ಯೂ35ರ ಲೋಗೋ ಲಾಂಚ್ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಲೋಗೋ ಅನಾವರಣಗೊಂಡಿತು.
ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್ ಅವರು ಉಪಸ್ಥಿತರಿದ್ದು, ಟೂರ್ನಿಯ ಯಶಸ್ಸಿಗೆ ಶುಭ ಹಾರೈಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸೇರಿದಂತೆ ಕ್ರೀಡಾಸಕ್ತರು ಮತ್ತು ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೇ 3 ರಿಂದ ಮೇ 10, 2026ರವರೆಗೆ ತುಮಕೂರು ಟೆನ್ನಿಸ್ ಕ್ರೀಡಾಂಗಣದಲ್ಲಿ ಈ ಅಂತರರಾಷ್ಟ್ರೀಯ ಮಹಿಳಾ ಟೆನ್ನಿಸ್ ಟೂರ್ನಿ ನಡೆಯಲಿದೆ. ವಿಶ್ವದ ವಿವಿಧ ದೇಶಗಳ ಮಹಿಳಾ ಟೆನ್ನಿಸ್ ಆಟಗಾರ್ತಿಯರು ಇಲ್ಲಿ ಸ್ಪರ್ಧಿಸಲಿದ್ದಾರೆ. ಕ್ರೀಡಾ ಪ್ರಿಯರಿಗೆ ಇದೊಂದು ಸುವರ್ಣಾವಕಾಶ ಎಂದು ಸಚಿವ ಡಾ. ಪರಮೇಶ್ವರ್ ತಿಳಿಸಿದರು.
ತುಮಕೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಟೆನ್ನಿಸ್ ಸ್ಪರ್ಧೆ ಆಯೋಜನೆಯಾಗುತ್ತಿರುವುದು ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ. ಎಲ್ಲಾ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

Post a Comment