Top News

ಮೈಸೂರಿನಲ್ಲಿ ಜಿ.ಸಿ. ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ


 ಮೈಸೂರು, ಮಾರ್ಚ್ 28: ನಗರದ ಜಿ.ಸಿ. ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ತಜ್ಞ ವೈದ್ಯ ಡಾ. ಗಿರೀಶ್ ಚಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.


ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಯು ಕ್ರೀಡಾ ವೈದ್ಯಕೀಯ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಲಿದೆ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಆಸ್ಪತ್ರೆ ಮಹತ್ವದ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.


ವಿವಿಧ ಕ್ಷೇತ್ರಗಳ ಗಣ್ಯರು, ವೈದ್ಯರು ಮತ್ತು ಸ್ಥಳೀಯ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Post a Comment

Previous Post Next Post