Top News

ಬಾಗೇಪಲ್ಲಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ – ವಿವಿಧ ಶಾಖೆಗಳ ಪರಿಶೀಲನೆ, ಸಾರ್ವಜನಿಕ ಅಹವಾಲುಗಳ ಸ್ವೀಕಾರ




ಬಾಗೇಪಲ್ಲಿ: ಜಿಲ್ಲಾಧಿಕಾರಿಗಳು ಇಂದುಬಾಗೇಪಲ್ಲಿ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ವಿವಿಧ ಆಡಳಿತಾತ್ಮಕ ಶಾಖೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಭೂಸುರಕ್ಷಾ ಯೋಜನೆ ಕಾರ್ಯಗಳ ಪ್ರಗತಿ ಕುರಿತು ಮಾಹಿತಿ ಪಡೆದು, ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿದರು.


ಪರಿಶೀಲನೆ ವೇಳೆ ಕಚೇರಿಯ ವಿವಿಧ ವಿಭಾಗಗಳಲ್ಲಿ ನಡೆಯುತ್ತಿರುವ ಕಾರ್ಯಪದ್ಧತಿಯನ್ನು ಅವಲೋಕಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರಿಗೆ ನೀಡುವ ಸೇವೆಗಳು ವೇಗವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇದಾದ ನಂತರ ಸಾರ್ವಜನಿಕರಿಂದ ಬಂದಿದ್ದ ವಿವಿಧ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿಗಳು ಸ್ವತಃ ಆಲಿಸಿ, ಹಲವಾರು ಅಹವಾಲುಗಳನ್ನು ಸ್ವೀಕರಿಸಿದರು. ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ವಿಲೇವಾರಿಗೊಳಿಸುವುದರ ಜೊತೆಗೆ ಅರ್ಜಿದಾರರಿಗೆ ಸೂಕ್ತ ಮಾಹಿತಿಯನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಭೂದಾಖಲೆಗಳ ಉಪನಿರ್ದೇಶಕರು, ಉಪವಿಭಾಗಾಧಿಕಾರಿಗಳು, ಬಾಗೇಪಲ್ಲಿ ತಾಲ್ಲೂಕು ತಹಶೀಲ್ದಾರ್, ಚೇಳೂರು ತಾಲ್ಲೂಕು ತಹಶೀಲ್ದಾರ್, ಭೂದಾಖಲೆಗಳ ಸಹಾಯಕ ನಿರ್ದೇಶಕರು ಸೇರಿದಂತೆ ಇತರ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಸೂಚಿಸಿದರು.

Post a Comment

Previous Post Next Post