Top News

ಅನಿಲ ಅಭಾವ ಹಿನ್ನೆಲೆ: ಅಕ್ರಮ ಮರ ಕಡಿತ ತಡೆಯಲು ಅರಣ್ಯ ಇಲಾಖೆಗೆ ಕಟ್ಟೆಚ್ಚರ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ಅನಿಲ (ಗ್ಯಾಸ್) ಪೂರೈಕೆಯಲ್ಲಿ ಉಂಟಾಗಿರುವ ಅಭಾವದಿಂದ ಸೌದೆ (ಮರದ ಇಂಧನ)ಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಡುಗಳು ಹಾಗೂ ಸರ್ಕಾರಿ ಭೂಮಿಗಳಲ್ಲಿ ಅಕ್ರಮ ಮರ ಕಡಿತವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಮಾತನಾಡಿದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು, ಕಾಡು ಪ್ರದೇಶಗಳು, ಕಾಡಿನಂಚಿನ ಭಾಗಗಳು ಮತ್ತು ಸರ್ಕಾರಿ ಭೂಮಿಗಳಲ್ಲಿ ಮರಗಳನ್ನು ಅಕ್ರಮವಾಗಿ ಕಡಿದು ಸೌದೆಗಾಗಿ ಬಳಸುವ ಪ್ರವೃತ್ತಿಯನ್ನು ಕಟ್ಟುನಿಟ್ಟಾಗಿ ತಡೆಯಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಎಲ್ಲ ಅರಣ್ಯ ವಲಯಗಳಲ್ಲಿ ಗಸ್ತು ಹಾಗೂ ನಿಗಾವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಆದೇಶಿಸಿದ್ದು, ಅಕ್ರಮ ಮರ ಕಡಿತ ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

 ಪರಿಸರ ಸಂರಕ್ಷಣೆ ಮತ್ತು ಅರಣ್ಯ ಸಂಪತ್ತಿನ ರಕ್ಷಣೆಯಲ್ಲಿ ಸರ್ಕಾರ ಗಂಭೀರವಾಗಿದ್ದು, ಸಾರ್ವಜನಿಕರೂ ಸಹ ಅಕ್ರಮ ಮರ ಕಡಿತವನ್ನು ತಡೆಗಟ್ಟಲು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿ ಎಂದು ತಿಳಿಸಲಾಗಿದೆ.

Post a Comment

Previous Post Next Post