ರೈತರ ಬೆಳೆ ಕಾಪಾಡಲು ತ್ವರಿತ ಕ್ರಮಕ್ಕೆ ಸೂಚನೆ
ಬೆಂಗಳೂರು, ಮಾರ್ಚ್ 21: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಕಟಾವಿಗೆ ಬಂದಿದ್ದ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ಈ ಬಗ್ಗೆ ತಕ್ಷಣವೇ ನಿಖರ ಸಮೀಕ್ಷೆ ನಡೆಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅನೇಕ ಪ್ರಮುಖ ಬೆಳೆ
ಗಳು ಕೈಗೆ ಬರುವ ಸಮಯದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಹಲವು ಭಾಗಗಳಲ್ಲಿ ಮಳೆಯ ಜೊತೆಗೆ ಆಲಿಕಲ್ಲುಗಳು ಬಿದ್ದಿದ್ದು, ಬೆಳೆಗಳು ನೆಲಕಚ್ಚಿವೆ. ಹಾನಿಗೊಳಗಾದ ನಿರ್ದಿಷ್ಟ ಪ್ರದೇಶಗಳನ್ನು ಗುರುತಿಸಲು ರಾಜ್ಯ ಸರ್ಕಾರಗಳೊಂದಿಗೆ ತಕ್ಷಣವೇ ಸಂಪರ್ಕ ಸಾಧಿಸಿ ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ. ಸುಧಾಕರ್ ಅವರು ಕ್ಷೇತ್ರದ ರೈತರ ನೆರವಿಗೆ ಸ್ಪಂದಿಸಿದ್ದಾರೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲಿನಿಂದಾಗಿ ರೈತರು ಅನುಭವಿಸಿರುವ ನಷ್ಟದ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಕೇಂದ್ರ ಕೃಷಿ ಸಚಿವರ ಮಾರ್ಗದರ್ಶನದಲ್ಲಿ ಬೆಳೆ ಹಾನಿ ಸಮೀಕ್ಷೆಯನ್ನು ಶೀಘ್ರಗೊಳಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಂಸದರು ಈಗಾಗಲೇ ಸ್ಥಳೀಯ ಕೃಷಿ ಇಲಾಖೆ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ನಷ್ಟದ ವಿವರ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಬೆಳೆ ವಿಮೆ ಮತ್ತು ಪರಿಹಾರ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಆಗ್ರಹಿಸಿದ್ದಾರೆ.


Post a Comment