ಚಿಕ್ಕಬಳ್ಳಾಪುರ: ಹೂವು, ತರಕಾರಿ ಹಾಗೂ ಹಣ್ಣುಗಳ ಬೆಳೆಯಲ್ಲಿ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಸೌಲಭ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಜಾರಿಗೆ ತರಲಾಗಿದ್ದ ಯೋಜನೆಗಳ ಕುರಿತು ಸಾರ್ವಜನಿಕ ವಲಯದಲ್ಲಿ ಮತ್ತೆ ಚರ್ಚೆ ತೀವ್ರಗೊಂಡಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ತಿಳಿಸಿದೆ.
ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೀಕಲ್ ರಾಮಚಂದ್ರ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ: ಜಿಲ್ಲೆಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳದೆ ಉಳಿದ ಹಿನ್ನೆಲೆ, ಪರ್ಯಾಯವಾಗಿ ಜಾರಿಗೆ ತಂದಿರುವ ಹೆಚ್.ಎನ್ ವ್ಯಾಲಿ ಯೋಜನೆಯ ನೀರನ್ನು ಜಿಲ್ಲೆಯ ವಿವಿಧ ಕೆರೆಗಳಿಗೆ ಹರಿಸಲಾಗುತ್ತಿದೆ. ಆದರೆ ಈ ನೀರನ್ನು ಮೂರನೇ ಹಂತದ ಶುದ್ಧೀಕರಣದ ಬಳಿಕವೇ ಹರಿಸಬೇಕು ಎಂಬ ನಿಯಮವಿದ್ದರೂ, ಆ ಪ್ರಕ್ರಿಯೆ ಪೂರ್ಣಗೊಳ್ಳದೇ ನೀರು ಹರಿಯುತ್ತಿರುವುದಾಗಿ ಹಲವು ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.
ಇದರ ಪರಿಣಾಮವಾಗಿ ಜಿಲ್ಲೆಯ ಕೆರೆಗಳಿಗೆ ಸೇರುವ ನೀರಿನಿಂದ ಕೃಷಿ ಬೆಳೆಗಳು ವಿಷಯುಕ್ತವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಬೆಳೆಗಳ ಗುಣಮಟ್ಟ ಕುಸಿಯುವುದರ ಜೊತೆಗೆ ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಹೇಳಲಾಗಿದೆ. ಕಿಡ್ನಿ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿರುವುದರ ಬಗ್ಗೆ ಸ್ಥಳೀಯರು ಚಿಂತೆ ವ್ಯಕ್ತಪಡಿಸಿದ್ದು, ರಕ್ತ ಶುದ್ಧೀಕರಣ ಚಿಕಿತ್ಸೆಗೆ ಒಳಗಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ, ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬಿಜೆಪಿ ಜಿಲ್ಲಾ ಸಮಿತಿ ಆರೋಪಿಸಿದೆ.
ಆದ್ದರಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಯುತ್ತಿರುವ ಹೆಚ್.ಎನ್ ವ್ಯಾಲಿ ನೀರನ್ನು ಕಡ್ಡಾಯವಾಗಿ ಮೂರನೇ ಹಂತದ ಶುದ್ಧೀಕರಣದ ಬಳಿಕವೇ ಹರಿಸಬೇಕು ಎಂದು ಆಗ್ರಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಭಾನುವಾರ ಚಿಕ್ಕಬಳ್ಳಾಪುರ ಬಂದ್‌ಗೆ ಕರೆ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆದರೆ ಭಾನುವಾರ ರಜಾದಿನವಾಗಿರುವುದರಿಂದ ಬಂದ್‌ನ ಪರಿಣಾಮ ಸರ್ಕಾರದ ಮೇಲೆ ಹೆಚ್ಚು ತಟ್ಟುವುದಿಲ್ಲ ಎಂಬ

Post a Comment