ನವದೆಹಲಿ - ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರನ್ನು ಭೇಟಿ ಮಾಡಿ, ರಾಜ್ಯದ ವಿಮಾನಯಾನ ಕ್ಷೇತ್ರದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ.
ಈ ವೇಳೆ ಅವರು:
✅ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕ್ರಿಯೆಗಳನ್ನು ವೇಗಗೊಳಿಸುವಂತೆ ಮನವಿ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಹೊರೆ ಕಡಿಮೆ ಮಾಡಲು ಇದು ಅತ್ಯಗತ್ಯ .
✅ ಬೆಂಗಳೂರು ಸ್ಕೈ ಡೆಕ್ ಯೋಜನೆಗೆ ತ್ವರಿತ ಅನುಮೋದನೆ ಕೋರಿದ್ದಾರೆ. ನೈಸ್ ರಸ್ತೆ ಬಳಿ ನಿರ್ಮಾಣವಾಗಲಿರುವ ಈ 250 ಮೀಟರ್ ಎತ್ತರದ ಸ್ಕೈಡೆಕ್ ಬೆಂಗಳೂರಿನ ಪ್ರಮುಖ ಪ್ರವಾಸಿ ಆಕರ್ಷಣೆಯ ಕೇಂದ್ರವಾಗಲಿದೆ .
✅ ರಾಜ್ಯದ ಇತರೆ ನಿರ್ಣಾಯಕ ಮೂಲಸೌಕರ್ಯ ಮತ್ತು ಸಂಪರ್ಕ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.
ರಾಜ್ಯದ ಭವಿಷ್ಯದ ಅಗತ್ಯಗಳನ್ನು ಪೂರೈಸುವ ಮೂಲಸೌಕರ್ಯ ನಿರ್ಮಾಣಕ್ಕೆ ಸಕಾಲಿಕ ಮಂಜೂರಾತಿ ಮತ್ತು ಬಲವಾದ ಕೇಂದ್ರ-ರಾಜ್ಯ ಸಮನ್ವಯದ ಅಗತ್ಯವನ್ನು ಸಚಿವರು ಒತ್ತಿ ಹೇಳಿದ್ದಾರೆ.
ಕೇಂದ್ರ ಸಚಿವರು ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಾಧ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Post a Comment