ಸಹೋದರತ್ವ, ಪ್ರೀತಿ, ಸೌಹಾರ್ದತೆಯ ಸಂದೇಶ ಸಾರಿದ ಹಬ್ಬ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಮಾರ್ಚ್ 21: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ದೇವನಹಳ್ಳಿ ಈಗ್ಗ ಮೈದಾನದಲ್ಲಿ ಆಯೋಜಿಸಲಾಗಿದ್ದ “ಈದ್-ಉಲ್-ಫಿತರ್” ನಮಾಜ್ ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಮುಸ್ಲಿಂ ಬಾಂಧವರೊಂದಿಗೆ ಭಾಗವಹಿಸಿ ಹಬ್ಬದ ಶುಭಾಶಯ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಈದ್ ಹಬ್ಬವು ಸಹೋದರತ್ವ, ಪ್ರೀತಿ, ದಾನ ಮತ್ತು ಸೌಹಾರ್ದತೆಯ ಸಂಕೇತವಾಗಿದೆ. ಈ ಪವಿತ್ರ ಸಂದರ್ಭವು ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದರು. ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್-ಉಲ್-ಫಿತರ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿಯ ಬಯ್ಯಪ್ಪ ಸದಸ್ಯರಾದ ಮಂಜುನಾಥ್, ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮತ್ತು ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಪಾಲ್ಗೊಂಡು ಶಾಂತಿ ಮತ್ತು ಸೌಹಾರ್ದಕ್ಕಾಗಿ ಪ್ರಾರ್ಥಿಸಿದರು.

Post a Comment