Top News

ಶಿಡ್ಲಘಟ್ಟದಲ್ಲಿ ಅಕ್ಕಪಡೆ ಪೊಲೀಸರಿಂದ ಜಾಗೃತಿ ಅಭಿಯಾನ: ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಹತ್ವದ ಕಾಯ್ದೆಗಳ ಮಾಹಿತಿ

 

ಶಿಡ್ಲಘಟ್ಟ: ಅಕ್ಕಪಡೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಾಗೂ ದ್ಯಾವಪ್ಪನಗುಡಿ ಜಾತ್ರಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ವಿವಿಧ ಕಾಯ್ದೆಗಳ ಕುರಿತು ಅರಿವು ಮೂಡಿಸಿದರು.


ಪೊಲೀಸರು ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ದುಷ್ಪರಿಣಾಮ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಅಲ್ಲದೆ, ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಗಳನ್ನು ಬಳಸಿಕೊಳ್ಳುವ ಕುರಿತು ಅವರು ವಿವರಿಸಿದರು. ಚೈಲ್ಡ್ ಲೈನ್ (1098), ಪೊಲೀಸ್ ಸಹಾಯವಾಣಿ (112) ಮತ್ತು ಸೈಬರ್ ವಂಚನೆ ನಿಯಂತ್ರಣ ಸಹಾಯವಾಣಿ (1930) ಕುರಿತು ಮಾಹಿತಿ ನೀಡಿ, ನಾಗರಿಕರು ಯಾವುದೇ ತೊಂದರೆ ಸಂದರ್ಭದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದರು.


ಪೊಲೀಸ್ ಇಲಾಖೆಯ ಈ ಜಾಗೃತಿ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉತ್ತಮ ಸ್ಪಂದನೆ ನೀಡಿದರು. ಮುಂದೆಯೂ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

Post a Comment

Previous Post Next Post