Top News

ಗೌರಿಬಿದನೂರು ನಗರದ ಜನಸಂದಣಿ ಪ್ರದೇಶಗಳಲ್ಲಿ ಪೊಲೀಸರಿಂದ ಪಾದಚಾರಿ ಪೆಟ್ರೋಲಿಂಗ್


 


ಗೌರಿಬಿದನೂರು, ಮಾರ್ಚ್ 22: ನಗರದ ಜನಸಂದಣಿ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪಾದಚಾರಿ ಪೆಟ್ರೋಲಿಂಗ್ (ಫುಟ್ ಪೆಟ್ರೋಲಿಂಗ್) ಕೈಗೊಳ್ಳಲಾಗಿದೆ.


ಗೌರಿಬಿದನೂರು ಪಟ್ಟಣದ ಮಾರುಕಟ್ಟೆ, ವ್ಯಾಪಾರ ಕೇಂದ್ರಗಳು ಮತ್ತು ಸಾರ್ವಜನಿಕರು ಹೆಚ್ಚಾಗಿ ಸಂಚರಿಸುವ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ತೆರಳಿ ಸ್ಥಳೀಯರ ಭದ್ರತೆಯನ್ನು ಖಾತ್ರಿಪಡಿಸಿದರು. ಈ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.


ಪಾದಚಾರಿ ಪೆಟ್ರೋಲಿಂಗ್ ಮೂಲಕ ಜನರು ಮತ್ತು ವ್ಯಾಪಾರಸ್ಥರಲ್ಲಿ ಭದ್ರತೆಯ ಭಾವನೆ ಮೂಡಿಸುವ ಜೊತೆಗೆ, ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಕ್ರಮ ವಹಿಸಿದೆ. ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆ ಹೆಚ್ಚಿಸಲು ಈ ನಿರಂತರ ಪೆಟ್ರೋಲಿಂಗ್ ಸಹಕಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Post a Comment

Previous Post Next Post