ತುಮಕೂರು, ಮಾರ್ಚ್ 23: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡವನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲಿಕಾರ್ಜುನ ಅವರನ್ನು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಎಸ್ಪಿ ಅಶೋಕ್ ವೆಂಕಟ್ ಅವರು ಆಸ್ಪತ್ರೆಗೆ ತೆರಳಿ, ಗಾಯಾಳು ಸಿಬ್ಬಂದಿಯ ಚಿಕಿತ್ಸೆಯ ವಿವರಗಳನ್ನು ವೈದ್ಯರಿಂದ ತಿಳಿದುಕೊಂಡರು. ಸಿಬ್ಬಂದಿಯ ಆರೋಗ್ಯ ಸ್ಥಿತಿ ಮತ್ತು ಚೇತರಿಕೆಯ ಬಗ್ಗೆ ಮಾಹಿತಿ ಪಡೆದು, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ತುಮಕೂರು ಜಿಲ್ಲಾ ಪೊಲೀಸ್ ವಿಭಾಗವು ಸಿಬ್ಬಂದಿಯ ಕ್ಷೇಮಾಭಿವೃದ್ಧಿಗೆ ಯಾವಾಗಲೂ ಬದ್ಧವಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಸಿಬ್ಬಂದಿಗೆ ಮಾನವೀಯ ಕಾಳಜಿಯೊಂದಿಗೆ ಹಿರಿಯ ಅಧಿಕಾರಿಗಳು ನೀಡಿರುವ ಈ ಭೇಟಿ ಸ್ಫೂರ್ತಿದಾಯಕವಾಗಿದೆ.

Post a Comment