Top News

ತುಮಕೂರಿನಲ್ಲಿ ಅತಿವೇಗದ ರೇಸಿಂಗ್, ಕರ್ಕಶ ಶಬ್ದದ ಕಾರಿಗೆ ಪೊಲೀಸರಿಂದ ಪ್ರಕರಣ ದಾಖಲು


 ತುಮಕೂರು: ನಗರದ ಮುಖ್ಯ ರಸ್ತೆಯಲ್ಲಿ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಕಾರನ್ನು ರೇಸಿಂಗ್ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಆರೋಪಿಯು ಕಾರಿನ ನಿಗದಿತ ಶಬ್ದಕ್ಕಿಂತ ಹೆಚ್ಚಿನ ಕರ್ಕಶ ಶಬ್ದ ಉಂಟಾಗುವಂತೆ ಸೈಲೆನ್ಸರ್ಗಳನ್ನು ಅಕ್ರಮವಾಗಿ ಅಳವಡಿಸಿಕೊಂಡು ವಾಹನ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಕುರಿತು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂಬರ್ 34/2026 ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 281 ಮತ್ತು ಮೋಟಾರು ವಾಹನ ಕಾಯ್ದೆಯ (ಐಎಂವಿ ಆಕ್ಟ್) ಸೆಕ್ಷನ್ 190(2) ರನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


ಪೊಲೀಸರ ಎಚ್ಚರಿಕೆ:

ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ಪ್ರಕಟಣೆ ಹೊರಡಿಸಿ, "ರಸ್ತೆ ಸುರಕ್ಷತೆಗಾಗಿ ಮೋಟಾರು ವಾಹನ ಕಾಯ್ದೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ" ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.


ಅತಿವೇಗ, ಅಜಾಗರೂಕ ವಾಹನ ಚಾಲನೆ, ಮತ್ತು ವಾಹನಗಳಿಗೆ ಅಕ್ರಮ ಮಾರ್ಪಾಡುಗಳು (ಮಾಡಿಫಿಕೇಶನ್) ಸಾರ್ವಜನಿಕರ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ ಎಂದು ಪೊಲೀಸರು ಎಚ್ಚರಿಸಿದ್ದಾರೆ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.


ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದ ಭಾಗವಾಗಿ ನಿಯಮ ಪಾಲನೆಗೆ ಒತ್ತು ನೀಡುತ್ತಿದೆ. ಸಾರ್ವಜನಿಕರು ಸಹ ಸುರಕ್ಷಿತ ಸಂಚಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

Post a Comment

Previous Post Next Post