Top News

TAPCMS ಮುಳಬಾಗಿಲು ಅಧ್ಯಕ್ಷರಾಗಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮರು ಆಯ್ಕೆ


 ಮುಳಬಾಗಿಲು:


ಮುಳಬಾಗಿಲಿನ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರುಕಟ್ಟೆ ಸಂಘ (TAPCMS) ಅಧ್ಯಕ್ಷರಾಗಿ ಕೋಲಾರ ಶಾಸಕ  ಕೊತ್ತೂರು ಮಂಜುನಾಥ್ ಅವರು ಎರಡನೇ ಬಾರಿ ಆಯ್ಕೆಯಾಗಿದ್ದಾರೆ.


ಅಧ್ಯಕ್ಷರಾಗಿ ಮರು ಆಯ್ಕೆಯಾದ ಬಳಿಕ ಮಾತನಾಡಿದ ಅವರು, ತಮ್ಮ ಮೇಲೆ ವಿಶ್ವಾಸ ಮತ್ತು ನಂಬಿಕೆ ಇಟ್ಟು ಬೆಂಬಲ ನೀಡಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ರೈತರ ಕಲ್ಯಾಣ, ಅಭಿವೃದ್ಧಿ ಮತ್ತು ಹಿತಾಸಕ್ತಿಗಾಗಿ ಸದಾ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.


ಮುಂದಿನ ದಿನಗಳಲ್ಲಿ ರೈತ ಸಮುದಾಯವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಕೃಷಿ ಕ್ಷೇತ್ರದ ಬೆಳವಣಿಗೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಹೇಳಿದರು. ಎಲ್ಲರ ಸಹಕಾರದೊಂದಿಗೆ ರೈತರ ಹಿತಕ್ಕಾಗಿ ಸಮರ್ಪಿತ ಸೇವೆ ಮುಂದುವರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.


ಕೊತ್ತೂರು ಮಂಜುನಾಥ್ ಅವರ ಮರು ಆಯ್ಕೆ ಹಿನ್ನೆಲೆಯಲ್ಲಿ ಬೆಂಬಲಿಗರು ಹಾಗೂ ರೈತ ಸಮುದಾಯದಲ್ಲಿ ಸಂತಸ ವ್ಯಕ್ತವಾಗಿದೆ.

Post a Comment

Previous Post Next Post