Top News

ಮೈಸೂರು ಪೊಲೀಸ್ ದಾಳಿ: ಜೂಜಾಟದಲ್ಲಿ ತೊಡಗಿದ್ದ 10 ಮಂದಿ ವಿರುದ್ಧ ಪ್ರಕರಣ, ₹41,180 ವಶ

ಮೈಸೂರು: ಜೂಜಾಟ ಹಾಗೂ ಇತರೆ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆಗೆ ಮಹತ್ವದ ಯಶಸ್ಸು ಲಭಿಸಿದೆ.

ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ತರದೆಲೆ ಗ್ರಾಮದ ಹೊರಭಾಗದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದೆ ಎಂಬ ಬಾತ್ಮಿದಾರರ ಮಾಹಿತಿಯ ಮೇರೆಗೆ ಥಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು.

ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳಿಂದ ಒಟ್ಟು ₹41,180 ನಗದು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ 10 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಜೂಜಾಟ ಹಾಗೂ ಇತರೆ ಅಕ್ರಮ ಚಟುವಟಿಕೆಗಳ ವಿರುದ್ಧ ಮುಂದುವರೆದೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾರ್ವಜನಿಕರು ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

— ವರದಿ

Post a Comment

Previous Post Next Post