ಹಾಸನ, : ಹಾಸನ ನಗರದ ಹೊಯ್ಸಳ ನಗರ ಬಡಾವಣೆಯಲ್ಲಿ ಸುಮಾರು ೯೩ ಲಕ್ಷ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಾಸಕ ಸ್ವರೂಪ್ ಪ್ರಕಾಶ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಬಡಾವಣೆಯಲ್ಲಿ ರಸ್ತೆ, ಒಳಚರಂಡಿ ಸೇರಿದಂತೆ ಹಲವಾರು ಮೂಲಸೌಕರ್ಯ ಸಮಸ್ಯೆಗಳನ್ನು ಮನಗಂಡು ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಶಾಸಕರು ಮಾತನಾಡಿ, ಅತಿ ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಡಾವಣೆಯ ಮುಖಂಡರು ಮತ್ತು ಸ್ಥಳೀಯ ಸಾರ್ವಜನಿಕರು ಸಹಕಾರ ಸೂಚಿಸಿದರು. ಕಾಮಗಾರಿಗಳು ಪೂರ್ಣಗೊಂಡ ನಂತರ ಬಡಾವಣೆಯ ಜನತೆಗೆ ಸಂಚಾರ ಮತ್ತು ಒಳಚರಂಡಿ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.
ಹೊಯ್ಸಳ ನಗರದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನವನ್ನು ಮಂಜೂರು ಮಾಡಿಸಲಾಗಿದ್ದು, ಉಳಿದ ಕಾಮಗಾರಿಗಳಿಗೂ ಶೀಘ್ರದಲ್ಲೇ ಅನುಮತಿ ದೊರಕಿಸಿಕೊಡಲಾಗುವುದು ಎಂದು ಅವರು ತಿಳಿಸಿದರು

Post a Comment