ಹಾಸನ,: ಹಾಸನ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ವಾಹನಗಳ ಕೊರತೆಯನ್ನು ನೀಗಿಸುವ ಸಲುವಾಗಿ ಶಾಸಕರ ಅನುದಾನದಲ್ಲಿ ಎರಡು ಬೊಲೆರೋ ವಾಹನಗಳನ್ನು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಶಾಸಕ ಸ್ವರೂಪ್ ಪ್ರಕಾಶ್ ಅವರು ಈ ವಾಹನಗಳನ್ನು ಹಸ್ತಾಂತರಿಸಿದರು. ಇದಕ್ಕೂ ಮೊದಲು ಪೊಲೀಸ್ ಇಲಾಖೆಗೆ ಒಂದು ವಾಹನವನ್ನು ನೀಡಲಾಗಿತ್ತು. ಈಗ ಎರಡು ಹೆಚ್ಚುವರಿ ವಾಹನಗಳನ್ನು ನೀಡುವ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಭದ್ರಪಡಿಸುವ ನಿಟ್ಟಿನಲ್ಲಿ ಶಾಸಕರು ಕೈಗೊಂಡ ಕ್ರಮವಾಗಿದೆ.
ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಚರ್ಚೆ
ವಾಹನ ಹಸ್ತಾಂತರದ ಬಳಿಕ ಶಾಸಕ ಸ್ವರೂಪ್ ಪ್ರಕಾಶ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಆರೋಗ್ಯಕರ ಚರ್ಚೆ ನಡೆಸಿದರು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕು, ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂಬ ಬಗ್ಗೆ ಅವರು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯವಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರದಿಂದ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.
ಹೊಸ ವಾಹನಗಳು ಜಿಲ್ಲೆಯ ವಿವಿಧೆಡೆ ಪೊಲೀಸ್ ಸಿಬ್ಬಂದಿಯ ತ್ವರಿತ ಸಂಚಾರಕ್ಕೆ ಮತ್ತು ಗಸ್ತು ಕಾರ್ಯಾಚರಣೆಗೆ ನೆರವಾಗಲಿದೆ ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟರು.

Post a Comment